ಯಾವುದೇ ಪ್ರಭಾವಕ್ಕೂ ಒಳಗಾಗುವುದಿಲ್ಲ

ಬೆಂಗಳೂರು : ಯಾವುದೇ ಒತ್ತಡ, ಪ್ರಭಾವಕ್ಕೆ ಒಳಗಾಗದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಾಸತ್ಯತೆ ಹೊರಗೆಳೆಯುವಂತೆ ವಿಶೇಷ ತನಿಖಾ ತಂಡಕ್ಕೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‍ಐಟಿಗೆ ನಾವು ಮುಕ್ತ ಸ್ವತಂತ್ರ ನೀಡಿದ್ದು, ನ್ಯಾಯಸಮ್ಮತ ತನಿಖೆ ನಡೆಸಬೇಕೆಂದು ನಿರ್ದೇಶನ ನೀಡಿದ್ದೇನೆ.

ಯಾರೊಬ್ಬರ ಪ್ರಭಾವ, ಒತ್ತಡ ಇಲ್ಲದಂತೆ ತನಿಖೆ ನಡೆಸಿ ಸತ್ಯಾಂಶವನ್ನು ಬಯಲು ಮಾಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಕೂಲಂಕಶವಾಗಿ ತನಿಖೆ ನಡೆಸಿ ರಾಜ್ಯದ ಜನತೆಗೆ ಸತ್ಯಾಸತ್ಯತೆ ಗೊತ್ತಾಗಬೇಕು. ಹೀಗಾಗಿ ನಮ್ಮ ಸರ್ಕಾರ ಎಸ್‍ಐಟಿಗೆ ಈ ಪ್ರಕರಣ ವಹಿಸಿದೆ. ಯಾರನ್ನು ಕೂಡ ನಾವು ರಕ್ಷಣೆ ಮಾಡುವುದಿಲ್ಲ. ಯಾವುದೇ ಪ್ರಭಾವಕ್ಕೂ ಒಳಗಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

NEWS DESK

TIMES OF BENGALURU