ಸೌಮ್ಯ ರೆಡ್ಡಿಗೆ ಕೊರೊನಾ ಪಾಸಿಟಿವ್

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಬೆಂಗಳೂರಿನ ಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಶಾಸಕಿ ಸೌಮ್ಯ ರೆಡ್ಡಿ, ನನಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಹತ್ತಿರದ ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಜೊತೆಗೆ ಸಂಪರ್ಕದಲ್ಲಿದ್ದ ಎಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಕೋವಿಡ್ 2ನೇ ಅಲೆಯ ತೀವ್ರತೆ ಹೆಚ್ಚುತ್ತಿದ್ದು, ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮಕೈಗೊಂಡು ಮಾಸ್ಕ್ ಧರಿಸಿ. ಎಲ್ಲರಿಗೂ ಲಸಿಕೆ ನೀಡುವ ವಿಧಾನವನ್ನು ತ್ವರಿತಗೊಳಿಸಬೇಕೆಂದು ನಾನು ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.ಕೋವಿಡ್ ರೋಗಲಕ್ಷಣಗಳು ಹೆಚ್ಚಿಲ್ಲದಿದ್ದರು ಸಹ ನನಗೆ ಈ ಹಿಂದೆ ಅಸ್ತಮಾ ಇದ್ದ ಕಾರಣ, ಪಾಲಕರ ಸೂಚನೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಸಾರ್ವಜನಿಕರಿಗೆ ಕ್ಷೇತ್ರದಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ನನ್ನ ಕಚೇರಿಗೆ ಕರೆ ಮಾಡುವಂತೆ ಎಂದು ಹೇಳಿದ್ದಾರೆ.

NEWS DESK

TIMES OF BENGALURU