ಕೊರೊನಾ ಹೆಚ್ಚಳ : ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸಚಿವರು ಹಾಗೂ ವಲಯ ಉಸ್ತುವಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ.

ಇಂದು ಸಂಜೆ 5 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆಯಲಿದ್ದು. ಸಚಿವರಿಂದ ಅಭಿಪ್ರಾಯ ಪಡೆದು, ಅದನ್ನು ಜಾರಿಗೊಳಿಸುವ ಬಗ್ಗೆ ಸಿಎಂ ನಿರ್ಧರಿಸಲಿದ್ದಾರೆ ಎನ್ನಲಾಗಿದೆ.

NEWS DESK

TIMES OF BENGALURU