ಎಸ್‍ಐಟಿ ವಿಚಾರಣೆಗೆ ರಮೇಶ್ ಜಾರಕಿಹೊಳಿ ಹಾಜರು

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಸ್‍ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಆಡುಗೋಡಿಯ ಎಸ್‍ಐಟಿ ತಾಂತ್ರಿಕ ವಿಭಾಗದ ಮುಂದೆ ವಿಚಾರಣೆ ನಡೆಯಲಿದೆ.

ಸಂತ್ರಸ್ತ ಯುವತಿ ನೀಡಿದ ದೂರಿನ ಆಧಾರದ ಮೇಲೆ ರಮೇಶ್ ಜಾರಕಿಹೊಳಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‍ಐಟಿ ಅಧಿಕಾರಿಗಳು ನೋಟೀಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ತಮ್ಮ ಆಪ್ತ, ಮಾಜಿ ಶಾಸಕ ನಾಗರಾಜ್ ಹಾಗೂ ವಕೀಲರ ಜೊತೆ ವಿಚಾರಣೆಗೆ ಹಾಜರಾಗಿದ್ದಾರೆ.

NEWS DESK

TIMES OF BENGALURU