ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಪ್ರೊಟೆಸ್ಟ್

ಬೆಂಗಳೂರು : ಸಿಡಿ ಪ್ರಕರಣದ ವಿರುದ್ಧ ಕಾಂಗ್ರೆಸ್ ಬೀದಿಗಿಳಿದಿದು ಪ್ರತಿಭಟನೆಗೆ ಮುಂದಾಗಿದೆ. ಬೆಂಗಳೂರು ನಗರದ ಕೇಂದ್ರ, ದಕ್ಷಿಣ, ಉತ್ತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮೌರ್ಯ ವೃತ್ತದಲ್ಲಿ ಹಿರಿಯ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರು ಕಬ್ಬನ್‍ಪಾರ್ಕ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಮೌರ್ಯವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಮೇಯರ್ ಪದ್ಮಾವತಿ ಅವರು ರಮೇಶ್ ಜಾರಕಿಹೊಳಿ ವಿರುದ್ಧ ಕೇಸು ದಾಖಲಿಸಿ ಐದು ದಿನ ಕಳೆದರೂ ಇನ್ನೂ ಏಕೆ ಬಂಧಿಸಿಲ್ಲ. ಅತ್ಯಾಚಾರದಂತಹ ಪ್ರಕರಣದ ದಾಖಲಾದಾಗ ಸಾಮಾನ್ಯ ಆರೋಪಿಗಳನ್ನು 24 ಗಂಟೆಯ ಒಳಗೆ ಬಂಧಿಸಲಾಗುತ್ತದೆ. ಆದರೆ ರಮೇಶ್ ಜಾರಕಿಹೊಳಿ ವಿಶೇಷ ತನಿಖಾ ದಳವನ್ನು ದುರುಪಯೋಗ ಪಡಿಸಿಕೊಳ್ಳತ್ತಿದ್ದಾರೆ ಎಂದು ಆರೋಪಿಸಿದರು.

NEWS DESK

TIMES OF BENGALURU