ಬೆಂಗಳೂರು: ನಗರದಲ್ಲಿ ದಿನೇ ದಿನೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮೊನ್ನೆ 2 ಸಾವಿರಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ನಿನ್ನೆಯೂ ಪ್ರಕರಣಗಳ ಸಂಖ್ಯೆ ಎರಡು ಸಾವಿರದ ಗಡಿ ಸಮೀಪ ಇದೆ. ಆದ್ದರಿಂದ ತ್ವರಿತವಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ವ್ಯವಸ್ಥಿತ ಯೋಜನೆಗಳನ್ನು ರೂಪಿಸಿಕೊಂಡು ಮೂಲದಲ್ಲಿಯೇ ಕೋವಿಡ್ ಉಲ್ಬಣಗೊಳ್ಳುವುದನ್ನು ನಿಯಂತ್ರಿಸಬೇಕು ಎಂದು ಆಯುಕ್ತರು ಎನ್. ಮಂಜುನಾಥ್ ಪ್ರಸಾದ್ ತಿಳಿಸಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಸಂಬಂಧಪಟ್ಟ ಅಧಿಕಾರಿಗಳ ಜೊತೆ ನಿನ್ನೆ ಜೂಮ್ ಮುಖಾಂತರ ವಚ್ರ್ಯುಯಲ್ ಸಭೆ ನಡೆಸಿದರು.
NEWS DESK
TIMES OF BENGALURU