ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗುತ್ತಾಳಾ ಸಿಡಿ ಲೇಡಿ..?

ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಡಿ ಲೇಡಿ ಮಧ್ಯಾಹ್ನ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಯುವತಿ ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ಮತ್ತೊಂದು ನೋಟಿಸ್ ಜಾರಿ ಮಾಡಿದ್ದು, ಇಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.

ಹೀಗಾಗಿ ಯುವತಿ ಇಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇಂದು ಮಧ್ಯಾಹ್ನ ತನ್ನ ವಕೀಲರ ಜೊತೆಗೆ ಸಿಡಿ ಯುವತಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಿ ಹೇಳಿಕೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಸದ್ಯ ಮಹಿಳಾ ಸಬ್ ಇನ್ಸ್ ಪೆಕ್ಟರ್ ಒಳಗೊಂಡಂತೆ ಯುವತಿ ಭದ್ರತೆಗೆ ಆರು ಮಂದಿ ಸಿಬ್ಬಂದಿಯನ್ನು ನಿಯೋಜಿಸಲು ಸಿದ್ಧತೆ ನಡೆಸಲಾಗಿದೆ.

NEWS DESK

TIMES OF BENGALURU