ಅಮೆರಿಕ ಕಂಪನಿಗಳ ಹೂಡಿಕೆ ಅನುಕೂಲವಾಗಲಿದೆ

ಬೆಂಗಳೂರು: ದೇಶದಲ್ಲಿ ಮೊತ್ತ ಮೊದಲಿಗೆ ಕರ್ನಾಟಕವು ಸಂಶೋಧನೆ ಮತ್ತು ಅಭಿವೃದ್ಧಿಗೆ ಶಕ್ತಿ ತುಂಬುವ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ ಯನ್ನು ಪ್ರಕಟಿಸಿದ್ದು, ಇದರಿಂದ ಅಮೆರಿಕ ಕಂಪನಿಗಳ ಹೂಡಿಕೆಗೆ ಹೆಚ್ಚು ಅನುಕೂಲವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಕೇರಳದಲ್ಲಿನ ಚುನಾವಣಾ ಪ್ರಚಾರದ ನಡುವೆಯೇ ಭಾರತ-ಅಮೆರಿಕ ಕಾರ್ಯತಂತ್ರದ ಸಹಭಾಗಿತ್ವ ವೇದಿಕೆ ಹಮ್ಮಿಕೊಂಡಿದ್ದ ವರ್ಚುವಲ್ ಸಭೆಯಲ್ಲಿ ತಿರುವನಂತಪುರದಿಂದಲೇ ಪಾಲ್ಗೊಂಡು ಮಾತನಾಡಿದ ಅವರು, ಈ ನೀತಿಯು ಕೈಗಾರಿಕಾಭಿವೃದ್ಧಿಗೆ ಹೆಚ್ಚು ಪೂರಕವಾಗಲಿದೆ ಹಾಗೂ ಅತ್ಯುತ್ತಮ ಮಾನವ ಸಂಪನ್ಮೂಲ ಸೃಷ್ಟಿಗೂ ಇದು ಸಹಾಯಕವಾಗುತ್ತದೆ ಎಂದರು.

NEWS DESK

TIMES OF BENGALURU