ಕೋವಿಡ್ ನಿಯಂತ್ರಣದಲ್ಲಿ ಅಧಿಕಾರಿಗಳ ದಿಢೀರ್ ಬದಲಾವಣೆ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ನೇಮಿಸಲಾಗಿದ್ದ ಇಬ್ಬರು ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ದಿಢೀರ್ ಬದಲಾವಣೆ ಮಾಡಿದೆ. ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಬಿ.ರಾಜೇಶ್‌ಗೌಡ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿತ್ತು. ಆದರೆ ಇಂದು ದಿಢೀರ್ ಬದಲಾವಣೆ ಮಾಡಿ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕಾ ಇಲಾಖೆಯ ನಿರ್ದೇಶಕರಾದ ಆರ್.ವಿನೋತ್‌ಪ್ರಿಯಾ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಾಗಿದ್ದ ಡಾ.ಅರುಂದತಿ ಚಂದ್ರಶೇಖರ್ ಅವರನ್ನು ಕೋವಿಡ್ ಕಣ್ಗಾವಲು ಮೇಲ್ವಿಚಾರಣೆಗೆ ವಿಶೇಷ ಅಧಿಕಾರಿಯನ್ನಾಗಿ ನೇಮಿಸಲಾಗಿತ್ತು. ಇವರನ್ನು ದಿಢೀರ್ ಬದಲಾವಣೆ ಮಾಡಿದ್ದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ನಿರ್ದೇಶಕರಾದ ಡಾ.ಕೆ.ಎನ್ ಅನುರಾಧ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಜುಂ ಫರ್ವೇಸ್ ತಿಳಿಸಿದ್ದಾರೆ.

NEWS DESK

TIMES OF BENGALURU