ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಕಟ್ಟೆಚ್ಚರ..!

ಬೆಂಗಳೂರು: ಒಂಬತ್ತು ಗಡಿ ಜಿಲ್ಲೆಗಳಲ್ಲಿ ಬಿಗಿ ನಿಯಂತ್ರಣ ಕ್ರಮ ಕೈಗೊಂಡರೆ ರಾಜ್ಯದಲ್ಲಿ ಕೊರೊನಾ 2ನೇ ಅಲೆ ಹಬ್ಬುವುದನ್ನು ಯಶಸ್ವಿಯಾಗಿ ನಿಯಂತ್ರಿಸಬಹುದು ಎಂಬ ಅಭಿಪ್ರಾಯ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ವ್ಯಕ್ತವಾಗಿದೆ. ಸೋಂಕು ಹೆಚ್ಚಿರುವ ಜಿಲ್ಲೆಗಳನ್ನು ಕೊರೊನಾ ಎರಡನೇ ಅಲೆ ಪೀಡಿತ ಜಿಲ್ಲೆಗಳು ಎಂದು ಪರಿಗಣಿಸಿ ಅಲ್ಲಿ ಕಠಿಣ ಕ್ರಮ ಜಾರಿ ಮಾಡಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ತಿಂಗಳ ಅಂಕಿ ಅಂಶಗಳನ್ನು ನೋಡಿದರೆ 9 ಜಿಲ್ಲೆಗಳಲ್ಲಿ ಸೋಂಕು ಹೆಚ್ಚಿದೆ. 11 ಜಿಲ್ಲೆಗಳಲ್ಲಿ 20ರ ಆಸುಪಾಸು, 10 ಜಿಲ್ಲೆಗಳಲ್ಲಿ ಬೆರಳೆಣಿಕೆಯಷ್ಟು ಪ್ರಕರಣಗಳು ಮಾತ್ರ ವರದಿಯಾಗುತ್ತಿವೆ. ಹೀಗಾಗಿ ಹೆಚ್ಚು ಪ್ರಕರಣ ಇರುವ ಜಿಲ್ಲೆಗಳಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸಿದರೆ ಇತರ ಜಿಲ್ಲೆಗಳನ್ನು ರಕ್ಷಿಸಬಹುದು ಎಂಬುದು ತಜ್ಞರ ಅಭಿಪ್ರಾಯವಾಗಿದೆ.

NEWS DESK

TIMES OF BENGALURU