ಕ್ಯಾಬ್ ಚಾಲಕನಿಂದ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ(ಕೆಐಎ) ಆಗಮನ ದ್ವಾರದ ಸಮೀಪ ಕ್ಯಾಬ್ ಚಾಲಕ ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಆವರಿಸಿತ್ತು. ರಾಮನಗರ ಮೂಲದ ಪ್ರತಾಪ್ (34) ಆತ್ಮಹತ್ಯೆಗೆ ಯತ್ನಿಸಿದ ಚಾಲಕ.

ಈ ಘಟನೆ ನಿನ್ನೆ ಸಂಜೆ 5 ಗಂಟೆಯಲ್ಲಿ ನಡೆದಿದ್ದು, ಏರ್‌ಪೋರ್ಟ್ ಸಿಬ್ಬಂದಿ ಚಾಲಕನನ್ನು ರಕ್ಷಣೆ ಮಾಡಿ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಶೇ.70 ಸುಟ್ಟ ಗಾಯಗಳು ಆಗಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

NEWS DESK

TIMES OF BENGALURU