ಬೆಂಗಳೂರು: ಸಿಡಿ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ವಿಚಾರಣೆಗೆ ಹಾಜರಾದ ಬಳಿಕ ವೈದ್ಯಕೀಯ ತಪಾಸಣೆಗೆ ಒಳಪಡಿಸಲು ಎಲ್ಲ ಸಿದ್ಧತೆಗಳೂ ನಡೆದಿದೆ. ಮೊದಲು ಯುವತಿಯನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಸಾಮಾನ್ಯ ಚಿಕಿತ್ಸೆಗೆ ಒಳಪಡಿಸಬಹುದು. ನಂತರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷೆ ನಡೆಸಲು ವಿಕ್ಟೋರಿಯಾ ಆಸ್ಪತ್ರೆಗೆ ಕರೆತರುವ ಸಾಧ್ಯತೆಗಳಿವೆ.
ಜತೆಗೆ ಯುವತಿಯ ಧ್ವನಿ ಪರೀಕ್ಷೆ ನಡೆಸಲು ಎಸ್ಐಟಿ ಮುಂದಾಗಿದೆ. ಇದೀಗ ಯುವತಿ 11.30ಕ್ಕೆ ಆಡುಗೋಡಿ ಟೆಕ್ನಿಕಲ್ ವಿಭಾಗಕ್ಕೆ ವಿಚಾರಣೆಗೆ ಹಾಜರಾದ ಬಳಿಕ ಎಸ್ಐಟಿ ಮುಂದಿನ ನಡೆ ಏನು ಎಂಬುದು ಗೊತ್ತಾಗಲಿದೆ. ನಿನ್ನೆ ಸಂತ್ರಸ್ತೆ ನ್ಯಾಯಾಧೀಶರ ಎದುರು ಹೇಳಿಕೆ ದಾಖಲಿಸಿದ್ದು, ನಂತರ ಎಸ್ಐಟಿ ಅಧಿಕಾರಿಗಳು ಯುವತಿಯನ್ನ ಆಡುಗೋಡಿಯ ಟೆಕ್ನಿಕಲ್ ಸೆಲ್ಗೆ ಕರೆದೊಯ್ದು ಸಿಆರ್ಪಿಸಿ 161 ಅಡಿ ಹೇಳಿಕೆಗಳನ್ನ ಪಡೆದಿದ್ದರು.
NEWS DESK
TIMES OF BENGALURU