ಕೋವಿಡ್: ಉಸ್ತುವಾರಿಗೆ 8 ಅಧಿಕಾರಿಗಳ ತಂಡ ರಚನೆ

ಬೆಂಗಳೂರು: ಕರ್ನಾಟಕದಲ್ಲಿ ಪತ್ತೆಯಾಗುತ್ತಿರುವ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪೈಕಿ ಬೆಂಗಳೂರಿನದ್ದೇ ಸಿಂಹಪಾಲಿದೆ. ಸಿಲಿಕಾನ್ ಸಿಟಿಯಲ್ಲಿ ಸೋಂಕಿತ ವಲಯಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಒಂದೊಂದು ವಲಯಕ್ಕೆ ಒಬ್ಬ ಐಎಎಸ್ ಅಧಿಕಾರಿ ನೇತೃತ್ವದ ತಂಡವನ್ನು ರಚಿಸಲಾಗಿದೆ.

ಬೆಂಗಳೂರಿನಲ್ಲಿ ಕೊವಿಡ್-19 ಸೋಂಕಿತ ವಲಯಗಳ ಸಂಖ್ಯೆ ಕ್ರಮೇಣ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಕೊರೊನಾವೈರಸ್ ಸೋಂಕಿನ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲು ಅನುಕೂಲವಾಗುವಂತೆ ಎಂಟು ವಲಯಗಳಿಗೆ ಎಂಟು ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ.

NEWS DESK

TIMES OF BENGALURU