ಬಸ್ ಸಂಚಾರ ಸ್ಥಗಿತವಾಗುವುದು ಖಂಡಿತ

ಬೆಂಗಳೂರು : ರಾಜ್ಯ ಸರ್ಕಾರ ಎಸ್ಮಾ ಜಾರಿಗೊಳಿಸಿದರೂ ನಾವು ಭಯ ಪಡುವುದಿಲ್ಲ. ಏಪ್ರಿಲ್ 7ರಿಂದ ಕರ್ನಾಟಕದಾದ್ಯಂತ ಬಸ್ ಸಂಚಾರ ಸ್ಥಗಿತವಾಗುವುದು ಖಂಡಿತ ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಏಪ್ರಿಲ್ 7ರಿಂದ ಕರ್ನಾಟಕದಾದ್ಯಂತ ಬಸ್ ಸಂಚಾರ ಸ್ಥಗಿತ-ಸರ್ಕಾರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ. ಬೆಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಏಪ್ರಿಲ್ 1 ರಿಂದ 6ರ ತನಕ ಸಾರಿಗೆ ಸಂಸ್ಥೆಗಳ ನೌಕರರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕೆಲಸ ಮಾಡಲಿದ್ದಾರೆ ಎಂದರು. ಏಪ್ರಿಲ್ 2ರಂದು ಸಾರ್ವಜನಿಕ ಪ್ರದೇಶಗಳಲ್ಲಿ ಕಾಫಿ, ಟೀ, ಬಜ್ಜಿ, ಬೋಂಡಾಗಳನ್ನು ಮಾರುವ ಮೂಲಕ ಸಾರ್ವಜನಿಕರು ಮತ್ತು ಸರ್ಕಾರದ ಗಮನ ಸೆಳೆಯಲಿದ್ದಾರೆ ಎಂದು ಹೇಳಿದರು. ರಾಜ್ಯ ಸರ್ಕಾರ ಎಸ್ಮಾ ಜಾರಿ ಮಾಡಿದರೂ ನಾವು ಭಯಪಡುವುದಿಲ್ಲ. ಏಪ್ರಿಲ್ 7ರಿಂದ ಕರ್ನಾಟಕದಾದ್ಯಂತ ಬಸ್ ಸಂಚಾರ ಸ್ಥಗಿತವಾಗಲಿದೆ. ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

NEWS DESK

TIMES OF BENGALURU