ಬಿಎಸ್‍ವೈ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಆಪರೇಷನ್ ಕಮಲಕ್ಕಾಗಿ ಆಮಿಷ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ಸೂಚಿಸಿದೆ. ಜೆಡಿಎಸ್ ಶಾಸಕರನ್ನು ಬಿಜೆಪಿಗೆ ಸೆಳೆಯಲು ಆಮಿಷವೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ, ಶಿವನಗೌಡ ನಾಯಕ್, ಪ್ರೀತಂ ಗೌಡ ಹಾಗೂ ಎಂ.ಬಿ. ಮರಮಕಲ್ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು.

ಅದನ್ನು ರದ್ದು ಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಎಫ್‍ಐಆರ್ ಗೆ  ತಡೆಯೊಡ್ಡಲಾಗಿತ್ತು. ಇದೀಗ ಎಫ್‍ಐಆರ್  ಗೆ  ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದೆ.

 

NEWS DESK

TIMES OF BENGALURU