ಕ.ಸಾ.ಪ ಚುನಾವಣೆಗೆ ನಾಮಪತ್ರ ಸಲ್ಲಿಕೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಈಗಾಗಲೇ ಆಕಾಂಕ್ಷಿಗಳು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿದ್ದು ನಾಳೆ ಸಿ.ಕೆ.ರಾಮೇಗೌಡರು ನಾಮಪತ್ರ ಸಲ್ಲಿಸಲಿದ್ದಾರೆ. ಏ. 7ರ ವರೆಗೂ ನಾಮಪತ್ರ ಸಲ್ಲಿಸಲು ಕಾಲಾವಕಾಶವಿದೆ. ಮೇ.9ರಂದು ಚುನಾವಣೆ ನಡೆಯಲಿದೆ.

ಪರಿಷತ್‍ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಗಮೇಶ ಬಾದವಾಡಗಿ ಅವರು ನಿನ್ನೆ ಚಾಮರಾಜಪೇಟೆಯಲ್ಲಿ ನಾಮಪತ್ರ ಸಲ್ಲಿಸಿದರು. ನಗರದ ಜಿಲ್ಲಾ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಸ್ಥಾನಕ್ಕೆ ದಯಾನಂದ ತಿಪ್ಪೇರುದ್ರಪ್ಪ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇಂದು ಕನ್ನಡಪರ ಹೋರಾಟಗಾರ ವಾ.ಚ.ಚನ್ನೇಗೌಡ ಹಾಗೂ ದೂರದರ್ಶನದ ವಿಶ್ರಾಂತ ಹೆಚ್ಚುವರಿ ಮಹಾನಿರ್ದೇಶಕ ಡಾ.ಮಹೇಶ್ ಜೋಷಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ.

 

NEWS DESK

TIMES OF BENGALURU