ಡಾ.ವಿಷ್ಣುವರ್ಧನ್ ರವರು ಓದಿರುವ ಶಾಲೆ ಉಳಿಸಿ

ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಓದಿದ್ದ ಬೆಂಗಳೂರಿನ ಮಾಡಲ್ ಕನ್ನಡ ಹೈಸ್ಕೂಲ್ ಅನ್ನು ಮುಚ್ಚಲು ನಿರ್ಧರಿಸಿದೆ. ಸುಮಾರು 150 ವರ್ಷಗಳ ಇತಿಹಾಸ ಹೊಂದಿರುವ ಈ ಶಾಲೆಯಲ್ಲಿ ಕಳೆದ ಮೂರು ವರ್ಷದಿಂದ ವಿದ್ಯಾರ್ಥಿಗಳ ದಾಖಲಾತಿ ಆಗುತ್ತಿಲ್ಲ. ಆದ ಕಾರಣ ಆಡಳಿತ ಮಂಡಳಿ ಶಾಲೆ ಮುಚ್ಚಲು ಮುಂದಾಗಿದೆ. ಇದಕ್ಕೆ ನಟಿ ಪ್ರಣಿತಾ ಸುಭಾಷ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವಿಟರ್ ನಲ್ಲಿ ಬರೆದುಕೊಂಡಿರುವ ಪ್ರಣಿತಾ, ಬೆಂಗಳೂರಿನ ಮೊದಲ ಕನ್ನಡ ಮಾಧ್ಯಮ ಶಾಲೆ, ಹಾಗೆಯೇ ಡಾ.ವಿಷ್ಣುವರ್ಧನ್ ರವರು ಓದಿರುವ ಸಂಸ್ಥೆ ಇದು. ಈ ಶಾಲೆ ಮುಚ್ಚುತ್ತಿರುವುದು ನನಗೆ ಬೇಸರ ತಂದಿದೆ. ಈ ವಿಷಯದ ಬಗ್ಗೆ ರಾಜ್ಯ ಸಕಾರ್ರವು ಗಮನಹರಿಸಬೇಕೇಂದು ಹೇಳಿದರು. ಪ್ರಣಿತಾ ಫೌಂಡೇಶನ್ ವತಿಯಿಂದ ಸಾಧ್ಯವಾದಷ್ಟು ಸಹಾಯ ಮಾಡಲು ಸಿದ್ದರಿದ್ದೇವೆ ಎಂದಿದ್ದಾರೆ. ಅಲ್ಲದೆ ಈ ಶಾಲೆಯನ್ನು ಉಳಿಸಿಕೊಳ್ಳುವಂತೆ ಪ್ರಣಿತಾ ರಾಜ್ಯ ಸರ್ಕಾರಕ್ಕೆ ಮತ್ತು ಮುಖ್ಯಮಂತ್ರಿಗೆ ಟ್ವಿಟರ್ ಮೂಲಕ ಮನವಿ ಮಾಡಿದ್ದಾರೆ.

 

NEWS DESK

TIMES OF BENGALURU