ಶೇ.10ರಷ್ಟು ಹಾಸಿಗೆಗಳನ್ನು ಮೀಸಲಿಡಿ

ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 7 ದಿನಗಳ ಕಾಲ ಕೋವಿಡ್ ಸೋಂಕಿತರಿಗಾಗಿ ಶೇ.10ರಷ್ಟು ಹಾಸಿಗೆಗಳನ್ನು ಮೀಸಲಿಡುವಂತೆ ನಗರದ ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಮನವಿ ಮಾಡಿಕೊಂಡಿದೆ.

ನಗರದಲ್ಲಿ ಕೊರೋನಾ ಸೋಂಕು ದೃಢಪಟ್ಟವರು ಬಹುತೇಕ ಹೋಮ್ ಐಸೋಲೇಷನ್ ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಸಿಮ್ಟಾಮ್ಯಾಟಿಕ್ ಇರುವವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಲಭ್ಯವಿದೆ. ಮುಂದಿನ ದಿನಗಳಲ್ಲಿ ಕೋವಿಡ್ ಸೋಂಕು ಕ್ರಮೇಣ ಹೆಚ್ಚಾದರೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಬೇಕಾಗುತ್ತದೆ. ಮುಂದಿನ 7 ದಿನದ ಮಟ್ಟಿಗೆ ಶೇ.10ರಷ್ಟು ಹಾಸಿಗೆಯನ್ನು ಕೋವಿಡ್ ಸೋಂಕಿತರಿಗೆ ಮೀಸಲಿಡಿ. ಸೋಂಕಿನ ಹೆಚ್ಚಳ ಮುಂದುವರಿದರೆ ಹಂತ ಹಂತವಾಗಿ ಹಾಸಿಗೆ ಸಾಮಥ್ರ್ಯವನ್ನು ಹೆಚ್ಚಿಸಿ ಎಂದು ಹೇಳಿದ್ದಾರೆ.