500 ಮಕ್ಕಳಿಗೆ ಕೊರೊನಾ ಸೋಂಕು..!

ಬೆಂಗಳೂರು : ಕರ್ನಾಟಕದಲ್ಲಿ ನಿತ್ಯ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 2928 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಕಳೆದ ಒಂದು ತಿಂಗಳಲ್ಲಿ ಬರೋಬ್ಬರಿ 500 ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ ಎಂಬುದು ತಿಳಿದುಬಂದಿದೆ. ಬುಧವಾರ 10 ವರ್ಷದೊಳಿಗಿರುವ ಸುಮಾರು 50 ಮಕ್ಕಳಿಗೆ ಸೋಂಕು ತಗುಲಿದೆ.

ಮಾರ್ಚ್ ಆರಂಭದಿಂದ 32 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಪರೀಕ್ಷೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಸಾಕಷ್ಟು ಮಕ್ಕಳು ಕೊರೊನಾ ಸೋಂಕಿಗೆ ಒಳಗಾಗಿಲ್ಲ ಆದರೆ ನಿತ್ಯ ಈ ಸಂಖ್ಯೆ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ 20 ರಿಂದ 40 ವರ್ಷದೊಳಗಿನವರು ಕೊರೊನಾ ಸೋಂಕಿಗೆ ಹೆಚ್ಚು ತುತ್ತಾಗುತ್ತಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೊರೊನಾ ಮೊದಲ ಅಲೆಯ ನಂತರ ಹಲವು ಶಾಲಾ ಕಾಲೇಜುಗಳು ಪುನರಾರಂಭಗೊಂಡಿದ್ದು, ಕೊರೊನಾ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ.

NEWS DESK

TIMES OF BENGALURU