ಬಿಬಿಎಂಪಿ ಆಯುಕ್ತರು ಸೇರಿ 16 ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸೇರಿದಂತೆ ಹದಿನಾರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ನಿನ್ನೆ ಆದೇಶ ಹೊರಡಿಸಿದೆ.

ಬಿಬಿಎಂಪಿ ಆಡಳಿತಾಧಿಕಾರಿ ಆಗಿದ್ದ ಗೌರವ್ ಗುಪ್ತಾ ಅವರನ್ನು ನೂತನ ಆಯುಕ್ತರನ್ನಾಗಿ ನೇಮಿಸಲಾಗಿದೆ. ರಾಜ್ಯ ಸರ್ಕಾರ ಬುಧವಾರ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದು, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸೇರಿದಂತೆ 16 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಜೊತೆಗೆ ಬಿಬಿಎಂಪಿಯ ಎಂಟು ವಲಯಗಳಿಗೆ ವಿಶೇಷ ಆಯುಕ್ತರನ್ನು ನೇಮಕ ಮಾಡಲಾಗಿದೆ.

NEWS DESK

TIMES OF BENGALURU