ಈಶ್ವರಪ್ಪ ಮೊದಲ ಬಾರಿ ಒಳ್ಳೆಯ ಕೆಲ್ಸ ಮಾಡಿದ್ದಾರೆ

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಹಿರಿಯ ಸಚಿವ ಕೆ.ಎಸ್. ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯದ ಆಡಳಿತ ಕುಸಿದು ಬಿದ್ದಿರುವುದಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶಿಸಿ ಮುಖ್ಯಮಂತ್ರಿಯನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸು ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕನಾಗಿ ಮಾಡುತ್ತಾ ಬಂದಿರುವ ಆರೋಪಗಳಿಗೆ ಈಶ್ವರಪ್ಪ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಮಾತಿಗೆ ಬದ್ಧರಾಗಿ ಉಳಿಯಬೇಕು. ಈಶ್ವರಪ್ಪ ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂಬುದನ್ನು ಸಾರಿದ್ದಾರೆ.ಇದಕ್ಕಾಗಿ ಅವರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ.

NEWS DESK

TIMES OF BEGALURU