ಕಪ್ಪುಪಟ್ಟಿ ಧರಿಸಿ ಸಾರಿಗೆ ನೌಕರರಿಂದ ಪ್ರತಿಭಟನೆ

ಬೆಂಗಳೂರು: ಸಾರಿಗೆ ನೌಕರರು ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಮೆಜೆಸ್ಟಿಕ್‍ನಲ್ಲಿ ನಾಲ್ಕು ನಿಗಮದ ನೌಕರರು ತಮ್ಮ ಕೈಗಳಿಗೆ ಕಪ್ಪುಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾಗಿದ್ದಾರೆ. ತಮ್ಮ 9 ಬೇಡಿಕೆಗಳನ್ನು ಈಡೇರಿಸುವಂತೆ ಇಂದಿನಿಂದ ಏಪ್ರಿಲ್ 7ರವರೆಗೆ ವಿನೂತನ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ನಿರ್ಧರಿಸಿದ್ದಾರೆ. ಕೈಗಳಿಗೆ ಕಪ್ಪುಪಟ್ಟಿ ಧರಿಸಿ ನ್ಯಾಯಯುತವಾದ ಬೇಡಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

 

NEWS DESK

TIMES OF BENGALURU