ಬಿಎಸ್‍ವೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು

ಬೆಂಗಳೂರು: ಸರ್ಕಾರದಲ್ಲಿನ ಭ್ರಷ್ಟಾಚಾರ ಸಂಬಂಧ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ಹೈಕಮಾಂಡ್‍ಗೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸ್ವ-ಇಚ್ಛೆಯಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ರಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕ್ಯಾಬಿನೆಟ್ ಸಚಿವರೊಬ್ಬರು ಸಿಎಂ ವಿರುದ್ಧ ಆರೋಪಿಸಿದ್ದಾರೆ. 1200 ಕೋಟಿ ಹಗರಣದ ಆರೋಪ ಮಾಡಿದ್ದಾರೆ. ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲ ಆ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡುತ್ತದೆ. ಈಶ್ವರಪ್ಪ ಹೇಳಿದ್ದು ತಪ್ಪು ಅಂತ ನಾನು ಹೇಳಲ್ಲ. ಸಚಿವರಾಗಿ ಈಶ್ವರಪ್ಪ ಅವರು ತಮ್ಮ ಕರ್ತವ್ಯ ಮಾಡಿದ್ದಾರೆ. ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದರು.

 

NEWS DESK

TIMES OF BENGALURU