ಪ್ರತಿದಿನ 1.5 ಲಕ್ಷ ಜನರಿಗೆ ಲಸಿಕೆ

ಬೆಂಗಳೂರು: ಬಿಬಿಎಂಪಿ ನೂತನ ಆಯುಕ್ತರಾಗಿ ನೇಮಕಗೊಂಡ ಬಿಬಿಎಂಪಿ ಆಡಳಿತಗಾರ ಗೌರವ್ ಗುಪ್ತ ಅವರಿಗೆ ನಿರ್ಗಮಿತ ಆಯುಕ್ತ ಮಂಜುನಾಥ್ ಪ್ರಸಾದ್ ಅಧಿಕಾರ ಹಸ್ತಾಂತರ ಮಾಡಿದರು. ಈ ವೇಳೆ ಮಾತನಾಡಿದ ಮಂಜುನಾಥ್ ಪ್ರಸಾದ್, ಕೊರೊನಾ ಪ್ರಕರಣಗಳು ಬೆಂಗಳೂರಿನಲ್ಲಿ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ನೀಡುವ ಕಾರ್ಯಕ್ರಮವನ್ನು ಪ್ರತಿದಿನ 1.5 ಲಕ್ಷ ಜನರಿಗೆ ಮುಟ್ಟಿಸುವ ವ್ಯವಸ್ಥೆ ನಡೆಯುತ್ತಿದೆ ಎಂದು ತಿಳಿಸಿದರು.

ತಾವು ಬಿಬಿಎಂಪಿ ಆಯುಕ್ತರಾಗಿದ್ದಾಗ ಮಾಡಿದ ಕಾರ್ಯಕ್ರಮಗಳನ್ನು ಮೆಲಕು ಹಾಕಿದ ಅವರು, ಎರಡನೆ ಅಲೆಯ ಕೊರೊನಾ ಮೊದಲನೆ ಅಲೆಯಷ್ಟು ಭಯಂಕರವಾಗಿಲ್ಲವಾದ್ದರಿಂದ ಸಾವು-ನೋವಿನ ಪ್ರಮಾಣವು ಸಹ ಸಾಕಷ್ಟು ಕಡಿಮೆ ಪ್ರಮಾಣದಲ್ಲಿದೆ. ಆದರೆ, ಎರಡನೆ ಅಲೆಯು ಬಹಳ ವೇಗವಾಗಿ ಹರಡುತ್ತಿದೆ ಎಂದು ಎಚ್ಚರಿಸಿದ್ದಾರೆ.

NEWS DESK

TIMES OF BENGALURU