ಬೆಂಗಳೂರಿನಲ್ಲಿ 6 ರಿಂದ 9ನೇ ತರಗತಿಗಳು ಬಂದ್

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ 6 ರಿಂದ 9ನೇ ತರಗತಿಗಳನ್ನು ಬಂದ್ ಮಾಡಲು ಎಸ್.ಸುರೇಶ್ ಕುಮಾರ್ ಸೂಚನೆ  ನೀಡಿದ್ದಾರೆ. 6 ರಿಂದ 9ನೇ ತರಗತಿಗಳನ್ನು ಮುಂದಿನ ಆದೇಶದವರೆಗೆ ಸರ್ಕಾರ ಸ್ಥಗಿತಗೊಳಿಸಿದೆ. ಮುಖ್ಯಮಂತ್ರಿಗಳೊಂದಿಗೆ ಈ ಕುರಿತು ಚರ್ಚಿಸಲಾಗಿದೆ.

ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿ 6 ರಿಂದ 9ನೇ ತರಗತಿಗಳನ್ನು ಬಂದ್ ಮಾಡಲಾಗಿದೆ. 10ನೇ ತರಗತಿಗಳು ಮುಂದುವರೆಯಲಿವೆ. ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು. 6, 9ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆಗಳ ನಡೆಸುವ ಕುರಿತು ಮುಂದಿನ ದಿನಗಳಲ್ಲಿ ಅಗತ್ಯ ನಿದೇರ್ಶನ ನೀಡಲಾಗುತ್ತದೆ. ಪೋಷಕರಿಗೆ ಆತಂಕ ಬೇಡ ಎಂದು ಸಚಿವರು ಹೇಳಿದ್ದಾರೆ.

 

NEWS DESK

TIMES OF BENGALURU