ಶಾಲಾ, ಕಾಲೇಜುಗಳಲ್ಲಿ ಎನ್‍ಎಸ್‍ಎಸ್ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲ ಖಾಸಗಿ ಹಾಗೂ ಅನುದಾನಿತ ಶಾಲಾ, ಕಾಲೇಜುಗಳಲ್ಲಿ ಪ್ರಸ್ತುತ ಸಾಲಿನಿಂದ ಎನ್‍ಎಸ್‍ಎಸ್ ಘಟಕವನ್ನು ಕಡ್ಡಾಯವಾಗಿ ಪ್ರಾರಂಭಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಸಚಿವ ನಾರಾಯಣಗೌಡ, ರಾಜ್ಯದ ಪ್ರತಿ ಶಾಲಾ ಕಾಲೇಜುಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕವನ್ನು ಕಡ್ಡಾಯವಾಗಿ ಪ್ರಾರಂಭಿಸಬೇಕು. ಈ ಬಗ್ಗೆ ಸಂಬಂಧ ಪಟ್ಟ ಇಲಾಖಾ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

NEWS DESK

TIMES OF BENGALURU