ಕೊರೊನಾಗೆ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ರಾಜ್ಯದಲ್ಲಿ ತಗ್ಗಿದ್ದ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದೆರಡು ದಿನಗಳಿಂದ ಮೂರು ಸಾವಿರ ಪ್ರಕರಣಗಳು ದಾಖಲಾಗುತ್ತಿದೆ. ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಸುರಕ್ಷತಾ ಕ್ರಮ ಅನುಸರಿಸಲು ಮುಂದಾಗಿದೆ.

ಇದೇ ಹಿನ್ನಲೆ ರಾಜ್ಯ ಸರ್ಕಾರ ಇಂದು ಮಧ್ಯಾಹ್ನದೊಳಗೆ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ. ಈ ಕುರಿತು ಮಾತನಾಡಿರುವ ಆರೋಗ್ಯ ಸಚಿವ ಕೆ. ಸುಧಾಕರ್, ನಿನ್ನೆ 2,500 ಕೇಸ್ ಬೆಂಗಳೂರಲ್ಲಿ ದಾಖಲಾಗಿದೆ. ಈ ಹಿನ್ನೆಲೆ ನಿನ್ನೆ ಸಿಎಂ ಜೊತೆ ಮಾತುಕತೆ ನಡೆಸಿ, ಹೊಸ ಮಾರ್ಗಸೂಚಿ ಪ್ರಕಟಿಸುವ ಕುರಿತು ಚರ್ಚಿಸಲಾಗಿದೆ. ಇಂದು ಮಧ್ಯಾಹ್ನದೊಳಗೆ ಮಾರ್ಗಸೂಚಿ ಪ್ರಕಟಿಸಲಾಗುವುದು. ಈ ಮಾರ್ಗಸೂಚಿಯಲ್ಲಿ ಎಲ್ಲವೂ ಸ್ಪಷ್ಟನೆ ಸಿಗಲಿದೆ ಎಂದರು.

NEWS DESK

TIMES OF BENGALURU