ತನಿಖೆ ಆರಂಭದಲ್ಲೇ ಬಂಧಿಸಲಾಗುವುದಿಲ್ಲ

ಬೆಂಗಳೂರು: ಎಸ್‍ಐಟಿ ತನಿಖೆ ಆರಂಭದಲ್ಲೇ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಿ ಎನ್ನುವುದು ತಪ್ಪು ಎಂದು ಡಿಜಿ ಹಾಗೂ ಐಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ. ಕೋರಮಂಗಲದ ಕೆಎಸ್‌ಆರ್‌ಪಿ ಪರೇಡ್ ಮೈದಾನದಲ್ಲಿ ಇಂದು ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೌರವರಕ್ಷೆ ಸ್ವೀಕರಿಸಿದ ಅವರು, ಉತ್ತಮ ಸಾಧನೆ ಮಾಡಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಮಾಡಿದರು.

ಈ ವೇಳೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಎಸ್‍ಐಟಿ ಅಧಿಕಾರಿಗಳು ಅವರ ಕೆಲಸವನ್ನು ಮಾಡುತ್ತಿದ್ದಾರೆ. ಎಸ್‍ಐಟಿ ತನಿಖೆ ಆರಂಭದಲ್ಲಿಯೇ ಬಂಧನ ಮಾಡಬೇಕು ಎಂಬುದು ತಪ್ಪು. ಎಸ್‍ಐಟಿ ಹಂತ ಹಂತವಾಗಿ ತನಿಖೆ ಮಾಡುತ್ತಿದೆ. ತನಿಖೆಯ ಮೇಲೆ ನನಗೆ ಭರವಸೆ ಇದೆ ಎಂದು ಪ್ರವೀಣ್ ಸೂದ್ ಹೇಳಿದ್ದಾರೆ. ಪ್ರತಿ ದಿನ ಕರೆ ಮಾಡಿ ತನಿಖೆ ಯಾವ ಹಂತದಲ್ಲಿದೆ ಎಂದು ಕೇಳುವುದು ಸರಿಯಲ್ಲ. ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತದೆ ಎಂಬ ಭರವಸೆ ಇದೆ ಎಂದು ಅವರು ತಿಳಿಸಿದ್ದಾರೆ. ಇನ್ನು ಇದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಧುನಿಕ ತಂತ್ರಜ್ಞಾನ ಬಳಕೆಯಲ್ಲಿ ರಾಜ್ಯದ ಪೊಲೀಸರು   ಮುಂಚೂಣಿಯಲ್ಲಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

 

NEWS DESK

TIMES OF BENGALURU