ಲಾಕ್ ಡೌನ್ ಬದಲು ಲಸಿಕೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್, ಸೆಮಿ ಲಾಕ್‍ಡೌನ್ ಮತ್ತು ಕಫ್ರ್ಯೂ ಇಲ್ಲ. ಅದರ ಬದಲು ಲಸಿಕೆ ಪ್ರಮಾಣ ಹೆಚ್ಚಿಸಬೇಕಿದೆ. ಹಾಗೆಯೇ ಕೆಲವೊಂದು ಬದಲಾವಣೆಗಳನ್ನ ಮಾಡಲಾಗುತ್ತೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ. ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೆಮಿ ಲಾಕ್‍ಡೌನ್ ಮಾಡಲಾಗುತ್ತೆ ಅಂತಾ ಹೇಳಲಾಗಿತ್ತು.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು, ಸಧ್ಯದ ಮಟ್ಟಿಗೆ ರಾಜ್ಯದಲ್ಲಿ ಯಾವುದೇ ಲಾಕ್‍ಡೌನ್, ಕಫ್ರ್ಯೂ ಇಲ್ಲ. ಇನ್ನು ಕಳೆದ 3 ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಮತ್ತಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಿದೆ ಎಂದು ರವಿಕುಮಾರ್ ತಿಳಿಸಿದರು.

 

NEWS DESK

TIMES OF BENGALURU