ಬೆಂಗಳೂರು: ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳು ಎಲ್ಲರಿಗೂ ಅನ್ವಯವಾಗಬೇಕು. ಅದನ್ನು ಬಿಟ್ಟು ತಮಗೆ ಬೇಕಾದಾಗ ಮಾರ್ಗಸೂಚಿ ಬಿಡುಗಡೆ ಮಾಡಿ ಬೇಡವಾದಾಗ ಅದನ್ನು ಸಡಿಲ ಮಾಡಬಾರದು. ಆ ರೀತಿ ಮಾಡಿದರೆ ನಾವು ರಾಜಕೀಯ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಇಂದು ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಮಾರ್ಗಸೂಚಿ ಮಾಡಲಿ, ಅದು ಅವರಿಗೂ ಹಾಗೂ ಎಲ್ಲರಿಗೂ ಅನ್ವಯವಾಗುವಂತೆ ಮಾಡಲಿ. ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಮಾರ್ಗಸೂಚಿ ಮಾಡುವುದು ಬೇಡ. ಇದು ಪ್ರಜಾಪ್ರಭುತ್ವದ ಹಕ್ಕನ್ನು ಮೊಟಕುಗೊಳಿಸುವ ಪ್ರಯತ್ನವಾಗಿದೆ. ಅವರಿಗೆ ಬೇಕಾದಾಗ ಕಾನೂನು ಕಠಿಣ ಮಾಡುವುದು ಬೇಡವಾದಾಗ ಸಡಿಲ ಮಾಡುವುದು ಸರಿಯಲ್ಲ. ಆ ರೀತಿ ಮಾರ್ಗಸೂಚಿ ಮಾಡಿದರೆ ನಾವು ನಮ್ಮದೇ ಆದ ರಾಜಕೀಯ ಹೋರಾಟ ಮಾಡುತ್ತೇವೆ ಎಂದರು.
NEWS DESK
TIMES OF BENGALURU