ಇಬ್ಬರು ಶಂಕಿತ ಉಗ್ರರ ಬಂಧನ

ಬೆಂಗಳೂರು: ರಾಜ್ಯದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಯುವಕರನ್ನು ನೇಮಿಸಿಕೊಂಡು ತರಬೇತಿ ನೀಡುತ್ತಿದ್ದ ಆರೋಪದಡಿ ಬಂಧಿಸಲಾಗಿದ್ದ ಇಬ್ಬರು ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳದ (ಎನ್‍ಐಎ) ಅಧಿಕಾರಿಗಳು ನಗರದ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ತಮಿಳುನಾಡಿನ ಅಹ್ಮದ್ ಅಬ್ದುಲ್ ಖಾದರ್ ಹಾಗೂ ಇರ್ಫಾನ್ ನಾಸೀರ್‍ನನ್ನು ಕಳೆದ ಅಕ್ಟೋಬರ್‍ನಲ್ಲಿ ಎನ್‍ಐಎ ಅಧಿಕಾರಿಗಳು ಬಂಧಿಸಿದ್ದರು. ಅವರಿಂದ ಲ್ಯಾಪ್‍ಟಾಪ್, ಕಂಪ್ಯೂಟರ್ ಹಾಗೂ ಹಲವು ಸಾಧನಗಳನ್ನು ಜಪ್ತಿ ಮಾಡಿದ್ದರು. ಬಂಧಿತ ಆರೋಪಿಗಳು, ಕುರಾನ್ ಸರ್ಕಲ್ ಎಂಬ ಗುಂಪು ರಚಿಸಿಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ ಯುವಕರನ್ನು ನೇಮಿಸಿಕೊಳ್ಳುತ್ತಿದ್ದರು.

ನಗರದಲ್ಲಿರುವ ಯುವಕರನ್ನು ಸೆಳೆದು, ಅವರಿಗೆ ತರಬೇತಿಯನ್ನೂ ನೀಡುತ್ತಿದ್ದರು. ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಸಂಘಟನೆ ಜೊತೆಯೂ ಆರೋಪಿಗಳ ನಂಟಿದ್ದ ಮಾಹಿತಿ ಎನ್‍ಐಎಗೆ ಲಭ್ಯವಾಗಿತ್ತು. ಬೆಂಗಳೂರು ಹಾಗೂ ಇತರೆಡೆ ಭಯೋತ್ಪಾದಕ ಕೃತ್ಯ ಎಸಗುವುದು ಆರೋಪಿಗಳ ಉದ್ದೇಶವಾಗಿತ್ತು ಎಂದು ಹೇಳಲಾಗುತ್ತಿದೆ.

NEWS DESK

TIMES OF BENGALURU