ಅಪಾರ್ಟ್‍ಮೆಂಟ್‍ಗಳಲ್ಲಿ ಲಸಿಕೆ ಕೇಂದ್ರ ಸ್ಥಾಪನೆ

ಬೆಂಗಳೂರು: ನಗರದ ಅಪಾರ್ಟ್‍ಮೆಂಟ್ ಸಮುಚ್ಚಯಗಳಲ್ಲಿ ಸ್ಥಳಾವಕಾಶವಿದ್ದಲ್ಲಿ, ಸ್ಥಳೀಯ ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವದೊಂದಿಗೆ ತಾತ್ಕಾಲಿಕ ಲಸಿಕೆ ಕೇಂದ್ರಗಳನ್ನು ಸ್ಥಾಪಿಸುವ ಸಂಬಂಧ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ ಗೌರವ್ ಗುಪ್ತ ಹೇಳಿದರು.

ನಗರದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಸದಸ್ಯರ ಜೊತೆ ಶುಕ್ರವಾರ ವರ್ಚುವಲ್ ರೂಪದಲ್ಲಿ ಸಭೆ ನಡೆಸಿದ ಅವರು, ಸದ್ಯ ಹತ್ತಿರವಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಲಸಿಕೆ ಪಡೆಯಬಹುದು. ಸರ್ಕಾರ ಮಾರ್ಗಸೂಚಿ ಹೊರಡಿಸಿದ ನಂತರ ಅಪಾರ್ಟ್‍ಮೆಂಟ್‍ಗಳಲ್ಲಿ ಲಸಿಕೆ ಕೇಂದ್ರ ಸ್ಥಾಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

NEWS DESK

TIMES OF BENGALURU