ಬೆಂಗಳೂರಿನಲ್ಲಿ ಹೆಚ್ಚಾದ ಕೊರೊನಾ ಪ್ರಕರಣ

ಬೆಂಗಳೂರು : ಕರ್ನಾಟಕದಲ್ಲಿ ಶುಕ್ರವಾರ ಹೊಸದಾಗಿ 4991 ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1006229ಕ್ಕೆ ಏರಿಕೆಯಾಗಿದೆ. ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಐದು ಸಾವಿರದ ಅಂಚಿಗೆ ಬಂದಿದೆ.

ಬೆಂಗಳೂರಿನಲ್ಲಿ ಅತಿ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದು, 3509 ಪ್ರಕರಣಗಳು ಬೆಂಗಳೂರು ನಗರ ಪ್ರದೇಶದಲ್ಲಿ ದಾಖಲಾಗಿದೆ.ದಕ್ಷಿಣ ಕನ್ನಡ, ಹಾಸನ, ತುಮಕೂರು, ಮೈಸೂರು ಜಿಲ್ಲೆಗಳಲ್ಲಿಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1631 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಆರು ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಒಟ್ಟು 34219 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ಒಟ್ಟು 959400 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 12591 ಮಂದಿ ಸಾವನ್ನಪ್ಪಿದ್ದಾರೆ.

NEWS DESK

TIMES OF BENGALURU