ಕ್ಯೂಆರ್ ಕೋಡ್ ಆಧಾರಿತ ಟಿಕೆಟ್ ವಿತರಣೆ

ಬೆಂಗಳೂರು: ಜನ ಸಂಪರ್ಕವನ್ನು ಆದಷ್ಟು ತಗ್ಗಿಸುವ ನಿಟ್ಟಿನಲ್ಲಿ ಮೆಟ್ರೊ ರೈಲು ಪ್ರಯಾಣಿಕರಿಗೆ ಟೋಕನ್ ವಿತರಣೆ ಸ್ಥಗಿತಗೊಳಿಸಿರುವ ಬೆಂಗಳೂರು ಮೆಟ್ರೊ ರೈಲು ನಿಗಮವು (ಬಿಎಂಆರ್‍ಸಿಎಲ್) ಈಗ ಪರ್ಯಾಯ ಮಾರ್ಗವೊಂದನ್ನು ಕಂಡುಕೊಂಡಿದೆ.

ಜನಸಂಪರ್ಕವೂ ತಪ್ಪಬೇಕು, ಪ್ರಯಾಣಿಕರಿಗೆ ಹೆಚ್ಚು ತೊಂದರೆಯೂ ಆಗಬಾರದು ಎಂಬ ಉದ್ದೇಶದಿಂದ ಕ್ಯೂಆರ್ ಕೋಡ್ ಆಧಾರಿತ ಟಿಕೆಟ್ ವಿತರಣೆ ವ್ಯವಸ್ಥೆಯನ್ನು ತರಲು ನಿಗಮ ಮುಂದಾಗಿದೆ. ಮೆಟ್ರೊ ರೈಲು ಪ್ರಯಾಣದಲ್ಲಿ ಸಂಪೂರ್ಣ ನಗದು ರಹಿತ ವ್ಯವಸ್ಥೆ ತರಲು ಚಿಂತನೆ ನಡೆದಿದೆ. ಈ ನಿಟ್ಟಿನಲ್ಲಿ ಕ್ಯೂಆರ್ ಕೋಡ್ ಆಧಾರಿತ ವ್ಯವಸ್ಥೆ ಉತ್ತಮ ಮಾರ್ಗ. ಈ ವ್ಯವಸ್ಥೆ ಅಳವಡಿಸುವ ಉದ್ದೇಶದಿಂದ ಅರ್ಹ ಕಂಪನಿಗಳಿಂದ ಟೆಂಡರ್ ಆಹ್ವಾನಿಸಲಾಗಿದೆ’ ಎಂದು ನಿಗಮದ ಅಧಿಕಾರಿಯೊಬ್ಬರು ತಿಳಿಸಿದರು.

NEWS  DESK

TIMES OF BENGALURU