ಇಂದು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

ಬೆಂಗಳೂರು: ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸದ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಸಾರಿಗೆ ನೌಕರರು ಮುಷ್ಕರ ನಡೆಸಿದ್ದಾರೆ. ಏ. 7ರೊಳಗೆ ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.

ಇಂದು ಸಾರಿಗೆ ನೌಕರರು ಹಾಗೂ ಅವರ ಕುಟುಂಬದವರೊಂದಿಗೆ ನಗರಗಳ ಸರ್ಕಲ್‍ಗಳಲ್ಲಿ ಮಾನವ ಸರಪಳಿ ನಿರ್ಮಿಸಿ, ಭಿತ್ತಿಪತ್ರ ಪ್ರದರ್ಶನ ಮಾಡಲಿದ್ದಾರೆ. ಏಪ್ರಿಲ್ 4ರಂದು ಸಾರ್ವಜನಿಕರಿಗೆ ಕರಪತ್ರ ಹಂಚಲಿರುವ ಸಾರಿಗೆ ನೌಕರರು ಏಪ್ರಿಲ್ 5ರಂದು ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಏಪ್ರಿಲ್ 6ರಂದು ಸಾಮೂಹಿಕ ಉಪವಾಸ ಸತ್ಯಾಗ್ರಹ ನಡೆಸಲಿದ್ದು, ಏಪ್ರಿಲ್ 7ರಿಂದ ಕರ್ನಾಟಕದಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಲಿದ್ದಾರೆ. ಇಂದಿನಿಂದ ಏಪ್ರಿಲ್ 7ರವರೆಗೆ ಸಾರಿಗೆ ನೌಕರರ ಪ್ರತಿಭಟನೆ ನಡೆಯಲಿದೆ.

NEWS DESK

TIMES OF BENGALURU