ಸರ್ಕಾರದ ನಿರ್ಧಾರಗಳನ್ನು ಗೌರವಿಸುತ್ತೇನೆ

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಥಿಯೇಟರ್‌ಗಳಲ್ಲಿ ಶೇ.50ರಷ್ಟು ಮಾತ್ರ ಆಸನ ವ್ಯವಸ್ಥೆಗೆ ಅವಕಾಶ ನೀಡಿದೆ. ಸರ್ಕಾರದ ಈ ನಿರ್ಧಾರವನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸ್ವಾಗತಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಸೀಟ್ ಭರ್ತಿ ಎಂಬುದು ನಿಜಕ್ಕೂ ಸಂಕಷ್ಟದ ವಿಷಯ.

ಆಗಷ್ಟೇ ಬಿಡುಗಡೆಯಾದ ಚಿತ್ರಕ್ಕೆ ಇದು ಶಾಕಿಂಗ್ ವಿಚಾರ. ಆದರೆ ಒಂದು ಒಳ್ಳೆಯ ಉದ್ದೇಶಕ್ಕೆ ಈ ನಿಯಮ ಜಾರಿಮಾಡಲಾಗಿದೆ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಂಡು ಸರ್ಕಾರದ ನಿರ್ಧಾರ ಗೌರವಿಸುವುದು ನಮ್ಮ ಕರ್ತವ್ಯ ಎಂದಿದ್ದಾರೆ. ಸರ್ಕಾರದ ಹೊಸ ನಿಯಮದ ಪರಿಣಾಮ ಎರಡು ದಿನಗಳ ಹಿಂದಷ್ಟೇ ತೆರೆಕಂಡ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಚಿತ್ರಕ್ಕೆ ಧೈರ್ಯ ತುಂಬಿದ್ದಾರೆ. ಈ ಪರಿಸ್ಥಿತಿಯನ್ನು ಗೆದ್ದು ಯಶಸ್ವಿಯಾಗಿ ಹೊರಹೊಮ್ಮುವ ಶಕ್ತಿ ಯುವರತ್ನ ಚಿತ್ರಕ್ಕೆ ನೀಡಲಿ ಎಂದು ಹಾರೈಸಿದ್ದಾರೆ.

 

NEWS DESK

TIMES OF BENGALURU