ಎಚ್.ಡಿ ದೇವೆಗೌಡರವರ ಆರೋಗ್ಯದಲ್ಲಿ ಸ್ಥಿರ

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಾಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಆರೋಗ್ಯ ಸ್ಥಿರವಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ಮಣಿಪಾಲ ಆಸ್ಪತ್ರೆಯ ಆರೋಗ್ಯ ಬುಲೆಟಿನ್ ಮಾಹಿತಿ ನೀಡಿದೆ. ಮಾರ್ಚ್ 31 ರಂದು ದೇವೇಗೌಡ ಮತ್ತವರ ಪತ್ನಿ ಚೆನ್ನಮ್ಮ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು.

ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ದೇವೇಗೌಡ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿರಲಿಲ್ಲ. ದೇವೇಗೌಡ ಅವರಿಗೆ ಎದೆ ಮತ್ತು ಉಸಿರಾಟದ ಸಮಸ್ಯೆ ಇದ್ದ ಕಾರಣ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದರು. ಶುಕ್ರವಾರ ಮತ್ತೆ ಪರೀಕ್ಷೆ ನಡೆಸಿದಾಗ ದೇವೇಗೌಡ ಅವರಿಗೆ ಸೋಂಕಿರುವುದು ದೃಢಪಟ್ಟಿತ್ತು. ಇದೀಗ ಆರೋಗ್ಯ ಸ್ಥಿರವಾಗಿದ್ದು. ಆರೋಗ್ಯದ ಸ್ಥಿತಿಗತಿ ಪರಿಶೀಲಿಸಿ ಸೋಮವಾರ ಬಿಡುಗಡೆ ಮಾಡುವುದಾಗಿ ಆಸ್ಪತ್ರೆ ಮಾಹಿತಿ ನೀಡಿದೆ.

NEWS DESK

TIMES OF BENGALURU