ಸರ್ಕಾರದ ನಿರ್ಧಾರದಿಂದ ಜಿಮ್ ಮಾಲೀಕರಿಗೆ ನಷ್ಟ

ಬೆಂಗಳೂರು : ಕೊರೊನಾ 2ನೇ ಅಲೆ ಹಿನ್ನೆಲೆಯಲ್ಲಿ ಜಿಮ್‍ಗಳನ್ನು ಸಂಪೂರ್ಣ ಸ್ಥಗಿತಗೊಳಿಸಿರುವ ಸರ್ಕಾರದ ಕ್ರಮವನ್ನು ಜಿಮ್ ಅಸೋಸಿಯೇಷನ್ ಅಧ್ಯಕ್ಷ ರವಿಕುಮಾರ್ ವಿರೋಧಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸರ್ಕಾರ ಏಕಾಏಕಿ ನಿರ್ಧಾರ ಕೈಗೊಂಡಿರುವುದರಿಂದ ಜಿಮ್‍ಗಳ ಮಾಲೀಕರು ಸಂಕಷ್ಟಕ್ಕೆ ಈಡಾಗಲಿದ್ದಾರೆ. ಕೊರೊನಾ ನಿಯಮಾವಳಿಗಳನ್ನು ಜಿಮ್ ಮಾಲೀಕರು ಚಾಚುತಪ್ಪದೆ ಪಾಲಿಸಿಕೊಂಡು ಬಂದಿದ್ದರೂ ಸರ್ಕಾರ ದಿಢೀರ್ ಕೈಗೊಂಡ ನಿರ್ಧಾರದಿಂದ ನಾವು ಮತ್ತಷ್ಟು ನಷ್ಟಕ್ಕೆ ಒಳಗಾಗುತ್ತೇವೆ ಎಂದು ಆತಂಕ ವ್ಯಕ್ತಪಡಿಸಿದರು.

NEWS DESK

TIMES OF BENGALURU