ಬೈಕ್ ಕಳ್ಳನ ಬಂಧನ: 7 ದ್ವಿಚಕ್ರ ವಾಹನಗಳು ವಶ

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಕುಖ್ಯಾತ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ತೌಫಿಕ್ ಪಾಷಾ ಬಂಧಿತ ಆರೋಪಿ. ಜೆ.ಪಿ ನಗರದ ಸರಹದ್ದಿನಲ್ಲಿ ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್‍ಗಳನ್ನು ಕಳ್ಳತನ ಮಾಡಿ ಆರೋಪಿ ಎಸ್ಕೇಪ್ ಆಗುತ್ತಿದ್ದ.

ಈ ಕುರಿತು ಜೆ.ಪಿ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ 4 ಲಕ್ಷ ರೂ. ಬೆಲೆ ಬಾಳುವ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈತನ ಮೇಲೆ ಜೆ.ಪಿ ನಗರ, ಕೆ.ಪಿ ಅಗ್ರಹಾರ, ವಿಜಯನಗರ, ಬ್ಯಾಟರಾಯನಪುರ ಸೇರಿದಂತೆ ಹಲವು  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ.

 

NEWS DESK

TIMES OF BENGALURU