ಸಿಎಂ ವಿರುದ್ಧ ತನಿಖೆ; ಹೈಕೋರ್ಟ್ ಆದೇಶ

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪನವರ ಆಮಿಷ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಹೈಕೋರ್ಟ್ ಮಾ.31 ಅನುಮತಿ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವದುರ್ಗದಲ್ಲಿ ಬಿಎಸ್‍ವೈ ವಿರುದ್ಧ ಪ್ರಕರಣ ದಾಖಲಾಗಿತ್ತು. ನಂತರ ಎಫ್‍ಐಆರ್ ಗೆ ತಡೆಯಾಜ್ಞೆ ಕೋರಲಾಗಿತ್ತು. ಆದರೆ ಈಗ ತಡೆಯಾಜ್ಞೆ ತೆರವುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಈ ಹಿಂದೆ ಜೆಡಿಎಸ್ ನಿಂದ ಬಿಜೆಪಿ ಸೇರಲು ಯಡಿಯೂರಪ್ಪ ಆಮಿಷ ಒಡ್ಡಿದ್ದಾರೆ ಎಂದು ಶಾಸಕ ನಾಗನಗೌಡ ಪುತ್ರ ಶರಣಗೌಡ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ, ಶಿವನಗೌಡ ನಾಯಕ್, ಪ್ರೀತಮ್ ಗೌಡ, ಎಂ.ಬಿ.ಮರಮಕಲ್ ವಿರುದ್ಧ ದೂರು ದಾಖಲಾಗಿತ್ತು. ಇದಾದ ಮೇಲೆ ಎಫ್‍ಐಆರ್ ರದ್ದು ಮಾಡುವಂತೆ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದು, ಸದ್ಯ ಆ ತಡೆಯಾಜ್ಞೆ ಯನ್ನು ಹೈಕೋರ್ಟ್ ತೆರವುಗೊಳಿಸಿದೆ.

 

NEWS DESK

TIMES OF BENGALURU