ಬೆಂಗಳೂರು: ಎಲ್ಲರ ಆರೋಗ್ಯದ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಸರ್ಕಾರದ ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಲು ಪ್ರಯತ್ನಿಸುತ್ತೇವೆ ಎಂದು ಬೃಹತ್ ಬೆಂಗಳೂರು ಹೋಟೆಲ್ ಸಂಘದ ಅಧ್ಯಕ್ಷ ಪಿ.ಸಿ.ರಾವ್ ತಿಳಿಸಿದರು. ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಹೋಟೆಲ್ಗಳಲ್ಲಿ 50 ಪ್ರತಿಶತ ಮಾತ್ರ ಕುಳಿತುಕೊಳ್ಳುವ ವ್ಯವಸ್ಥೆ ಕಡ್ಡಾಯಗೊಳಿಸಿದೆ.
ಈ ಬಗ್ಗೆ ಅವರು ಪ್ರತಿಕ್ರಿಯಿಸಿದ್ದು, ನಗರದಲ್ಲಿ ಕೋವಿಡ್ ಹರಡುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸೂಕ್ತ ಕಠಿಣ ನಿರ್ಧಾರ ತೆಗೆದುಕೊಂಡಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈಗಾಗಲೇ ಹೋಟೆಲ್ಗಳಲ್ಲಿ 50 ಪ್ರತಿಶತ ಜನ ಕುಳಿತುಕೊಳ್ಳುವ ವ್ಯವಸ್ಥೆ ಮಾಡಿದ್ದೇವೆ. ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಜರ್, ಸ್ವಚ್ಛತೆ ಬಗ್ಗೆ ಹೆಚ್ಚು ಗಮನ ಕೊಟ್ಟು ಸಾಮಾಜಿಕ ಅಂತರ ಪಾಲಿಸುತ್ತಿದ್ದೇವೆ. ಸರ್ಕಾರ ಹೊರಡಿಸಿರುವ ಆದೇಶಕ್ಕೆ ಮುಖ್ಯವಾಗಿ ಗ್ರಾಹಕರು ಸಹಕರಿಸಬೇಕು. ಹೆಚ್ಚಿಗೆ ಮಟ್ಟದಲ್ಲಿ ಪಾರ್ಸೆಲ್ ತೆಗೆದುಕೊಂಡು ಹೋಗುವುದು, ಹೋಟೆಲ್ಗಳಲ್ಲಿ ಆದಷ್ಟು ಕಡಿಮೆ ಸಮಯ ಕುಳಿತುಕೊಳ್ಳುವ ಮೂಲಕ ಇತರ ಗ್ರಾಹಕರಿಗೆ ಅವಕಾಶ ಮಾಡಿಕೊಡಬೇಕು ಎಂದು ವಿನಂತಿಸಿದರು.
NEWS DESK
TIMES OF BENGALURU