ಅರ್ಜುನ್ ಗೌಡ ತೆರೆಗೆ ಬರಲು ರೆಡಿ

ನಟ ಪ್ರಜ್ವಲ್ ದೇವರಾಜ್ ಅಭಿನಯದ ಮತ್ತೂಂದು ಚಿತ್ರ ಅರ್ಜುನ್ ಗೌಡ ತೆರೆಗೆ ಬರಲು ರೆಡಿಯಾಗಿದೆ. ಕನ್ನಡ ಚಿತ್ರರಂಗದ ಕೋಟಿ ನಿರ್ಮಾಪಕ ಖ್ಯಾತಿಯ ರಾಮು ನಿರ್ಮಾಣದಲ್ಲಿ ಮೂಡಿ ಬಂದಿರುವ ಅರ್ಜುನ್ ಗೌಡ ಚಿತ್ರಕ್ಕೆ ಲಕ್ಕಿ ಶಂಕರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಈಗಾಗಲೇ ಸೆನ್ಸಾರ್‍ನಿಂದ ಯು/ಎ ಪ್ರಮಾಣ ಪತ್ರದೊಂದಿಗೆ, ಬಿಡುಗಡೆಗೆ ಗ್ರೀನ್ ಸಿಗ್ನಲ್ ಪಡೆದುಕೊಂಡಿರುವ ಅರ್ಜುನ್ ಗೌಡ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಚಿತ್ರವನ್ನು ಪ್ರೇಕ್ಷಕರಿಗೆ ತಲುಪಿಸುವ ಕೆಲಸದಲ್ಲಿ ನಿರತವಾಗಿದೆ. ಇದೇ ವೇಳೆ ಚಿತ್ರದ ಪ್ರಚಾರ ಭಾಗವಾಗಿ, ಇದೇ ಏ. 10ರಂದು ಅರ್ಜುನ್ ಗೌಡ ಟ್ರೇಲರ್ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

NEWS DESK

TIMES OF BENGALURU