ಸಿಡಿ ಪ್ರಕರಣವನ್ನು ಸಿಬಿಐಗೆ ವಹಿಸಿ; ಹೈಕೋರ್ಟ್‍ಗೆ ಪಿಇಎಲ್

ಬೆಂಗಳೂರು : ರಾಜ್ಯದಲ್ಲಿ ಸಿಡಿ ಪ್ರಕರಣ ದಿನೇ ದಿನೇ ಹಲವು ತಿರುವುಗಳನ್ನು ಪಡೆಯುತ್ತಿದೆ. ಇದೇ ಸಂದರ್ಭದಲ್ಲಿ ಎಸ್‍ಐಟಿ ತನಿಖೆಯಿಂದ ಸಿಡಿ ಪ್ರಕರಣದ ತನಿಖೆಯಿಂದಾಗಿ ಸರ್ಕಾರದ ಸಮಯ ಹಾಳಾಗುತ್ತಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ, ಹೈಕೋರ್ಟ್ ಗೆ ಸಾರ್ವಜನಿಕ ಅರ್ಜಿಯನ್ನು ಸಲ್ಲಿಸಲಾಗಿದೆ.

ಈ ಕುರಿತಂತೆ ರಾಜ್ಯ ಹೈಕೋರ್ಟ್ ಗೆ ವಕೀಲ ಡಾ.ಎಸ್.ಉಮೇಶ್ ಎಂಬುವರು ಅರ್ಜಿ ಸಲ್ಲಿಸಿದ್ದು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಿಂದಾಗಿ ಸರ್ಕಾರ ಸಮಯ ಹಾಳು ಮಾಡುತ್ತಿದೆ. ಹೀಗಾಗಿ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಅರ್ಜಿಯಲ್ಲಿ ನ್ಯಾಯಪೀಠಕ್ಕೆ ಮನವಿ ಮಾಡಿದ್ದಾರೆ.

NEWS DESK

TIMES OF BENGALRU