ಗರ್ಭಿಣಿಯರಿಗೆ ಸಹಾಯಧನ; ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಪ್ರಕಾರ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಸಹಾಯಧನ ನೀಡುವ ಬಗ್ಗೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕೋವಿಡ್-19 ನಿರ್ವಹಣೆ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದಲ್ಲಿ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ವಕೀಲರು ವಾದಿಸಿ, ಗರ್ಭಿಣಿಯರು, ಬಾಣಂತಿಯರಿಗೆ ಕೇಂದ್ರ ಸರ್ಕಾರದಿಂದ ನೀಡಲಾಗುತ್ತಿರುವ 5 ಸಾವಿರ ರೂ. ಸಹಾಯಧನದ ಬಗ್ಗೆ ವಿವರಿಸಿದರು. ವಾದ ಆಲಿಸಿದ ಪೀಠ, ಆಹಾರ ಭದ್ರತಾ ಕಯ್ದೆಯ ಪ್ರಕಾರ ಸಹಾಯಧನ ನೀಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತನ್ನ ಪಾತ್ರದ ಬಗ್ಗೆ ತಿಳಿಸಿದೆ. ಅದರಂತೆ ರಾಜ್ಯ ಸರ್ಕಾರವೂ ತನ್ನ ನಿಲುವು ತಿಳಿಸುವಂತೆ ಸೂಚಿಸಿ ವಿಚಾರಣೆಯನ್ನು ಏಪ್ರಿಲ್ 7ಕ್ಕೆ ಮುಂದೂಡಿತು.

 

NEWS DESK

TIMES OF BENGALURU