ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್..?

ಬೆಂಗಳೂರು : ಸಿ.ಡಿ ಪ್ರಕರಣದಲ್ಲಿ ಸಿಲುಕಿ ಬಂಧನದ ಭೀತಿ ಎದುರಿಸುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆಯಂತೆ. ಇನ್ನು ಈ ಬಗ್ಗೆ ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಇದನ್ನು ಖಚಿತಪಡಿಸಿದ್ದಾರೆ, ರಮೇಶ್ ಜಾರಕಿಹೊಳಿಗೆ ಕೊರೊನಾ ಧೃಢಪಟ್ಟಿರುವುದರಿಂದ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರದಿಂದ ದೂರ ಉಳಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ನಿನ್ನೆ ರಮೇಶ್ ಜಾರಕಿಹೊಳಿಗೆ ದೂರವಾಣಿ ಕರೆ ಮಾಡಿದ್ದ ವೇಳೆ, ತಮಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಎಸ್‍ಐಟಿ ವಿಚಾರಣೆಗೂ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಆರೋಗ್ಯ ಸುಧಾರಿಸಿದ ನಂತರ ತನಿಖಾಧಿಕಾರಿಗಳ ಮುಂದೆ ಹಾಜರಾಗುವುದಾಗಿ ಹೇಳಿಕೊಂಡರೆಂದು ಸ್ಪಷ್ಟಪಡಿಸಿದ್ದಾರೆ.

NEWS DESK

TIMES OF BENGALURU