ಏಪ್ರಿಲ್ 7ರಿಂದ ಸಾರಿಗೆ ಮುಷ್ಕರ ಗ್ಯಾರಂಟಿ

ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಪ್ರತಿಭಟನಾ ಸಪ್ತಾಹ ನಡೆಸುತ್ತಿದ್ದಾರೆ. ಸಾರಿಗೆ ನೌಕರರ ವೇತನ ಹೆಚ್ಚಿಸಬೇಕೆಂದು ಸಾರಿಗೆ ನೌಕರರು ಆಗ್ರಹಿಸುತ್ತಿದ್ದಾರೆ. ಜೊತೆಗೆ ಸರ್ಕಾರಕ್ಕೆ ಏಪ್ರಿಲ್ 6ರವರೆಗೆ ಗುಡುವು ಕೊಟ್ಟಿದ್ದಾರೆ. ಏಪ್ರಿಲ್ 6ರೊಳಗೆ ಆರನೇ ವೇತನ ಆಯೋಗ ಜಾರಿ ಆಗಬೇಕು. ಇಲ್ಲದಿದ್ದರೆ ಏಪ್ರಿಲ್ 7ರಿಂದ ಮುಷ್ಕರ ಮಾಡುವುದು ನಿಶ್ಚಿತ ಎಂದು ಹೇಳಿದ್ದಾರೆ.

ಆರನೇ ವೇತನ ಆಯೋಗ ಜಾರಿಯಾಗದಿದ್ದರೆ, ಏಪ್ರಿಲ್ 7ರಂದು ಮುಷ್ಕರ ಮಾಡುವುದಾಗಿ ಸಾರಿಗೆ ನೌಕರರು ಕರೆಕೊಟ್ಟಿದ್ದಾರೆ. ಈ ಹಿನ್ನಲೆ ಇಂದು ವೇತನ ಹೆಚ್ಚಳದ ಬಗ್ಗೆ ಸರ್ಕಾರದಿಂದ ತೀರ್ಮಾನ ಹೊರಬೀಳುವ ಸಾಧ್ಯತೆ ಇದೆ. ಇಂದು ವೇತನ ಹೆಚ್ಚಳದ ಬಗ್ಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಿಎಂ ಬಿಎಸ್ ಯಡಿಯೂರಪ್ಪನವರ ಜೊತೆ ಚರ್ಚೆ ಮಾಡಲಿದ್ದಾರೆ. ಬಳಿಕ ಅಂತಿಮ ನಿರ್ಧಾರ ಪ್ರಕಟ ಮಾಡುವ ಸಾಧ್ಯತೆ ಇದೆ.

NEWS DESK

TIMES OF BENGALURU