ಡಿನೋಟಿಫಿಕೇಷನ್ ಪ್ರಕರಣ; ಬಿಎಸ್‍ವೈಗೆ ಬಿಗ್ ರಿಲೀಫ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಧಿಸಿದಂತೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಆ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿ ಅವರು ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.

ಆ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಬಿಎಸ್‍ವೈ ವಿರುದ್ಧ ವಿಚಾರಣೆಗೆ ತಡೆ ನೀಡಿದೆ. ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ವಸತಿ ಯೋಜನೆಗೆ 26 ಎಕರೆ ಭೂಮಿ ಮಂಜೂರು ಮಾಡಿ ನಕಲಿ ದಾಖಲೆ ಹಾಗೂ ನಕಲಿ ಸಹಿ ಬಳಸಿದ್ದ ಭೂಮಿಯನ್ನು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ತಮ್ಮಿಂದ ಹಿಂದಕ್ಕೆ ಪಡೆದಿದ್ದಾರೆ ಎಂದು ಉದ್ಯಮಿ ಎ.ಅಲಂ ಪಾಷಾ ಅವರು ಆರೋಪ ಮಾಡಿ ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ಆ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಬಿ.ಎಸ್. ಯಡಿಯೂರಪ್ಪ 2019ರಲ್ಲಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

 

NEWS DESK

TIMES OF BENGALURU