ಅನಾರೋಗ್ಯವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ?

ಸಿಡಿ ಕೇಸ್ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ರಾಜ್ಯ ಸರ್ಕಾರವನ್ನ ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. ಅತ್ಯಾಚಾರ ಪ್ರಕರಣವೊಂದೇ ಸಾಕು ಬಿಜೆಪಿ ಆಡಳಿತದ ನಿಜಬಣ್ಣ ತಿಳಿಯಲು. ಇನ್ನು ದೂರು ನೀಡಿದ ಸಂತ್ರಸ್ತೆಯನ್ನು ಆರೋಪಿಯಂತೆ ಸತತವಾಗಿ ವಿಚಾರಣೆ ನಡೆಸಲಾಗುತ್ತಿದೆ. ಅತ್ಯಾಚಾರ ಆರೋಪಿಯನ್ನು ರಾಜಮರ್ಯಾದೆಯಲ್ಲಿ ನೆಪಮಾತ್ರದ ವಿಚಾರಣೆ ನಡೆಸಲಾಗಿದೆ.

ಈ ಪ್ರಕರಣದಿಂದ ಚಳಿ ಜ್ವರ ಬಂದಿರುವ ಅತ್ಯಾಚಾರ ಆರೋಪಿಗೆ ನಿಜಕ್ಕೂ ಅನಾರೋಗ್ಯವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ? ಆರೋಪಿ ತಲೆಮರೆಸಿಕೊಳ್ಳುವ ಬಗ್ಗೆ ಪೆÇಲೀಸರೂ ತಲೆ ಕೆಡಿಸಿಕೊಂಡಿಲ್ಲ. ಆರೋಪಿಯ ಮೊಬೈಲ್ ಅನ್ನು ಹಲವು ದಿನಗಳವರೆಗೆ ಪೆÇಲೀಸರು ವಶಪಡಿಸಿಕೊಂಡಿಲ್ಲ. ಸಾಕ್ಷ್ಯ ನಾಶಕ್ಕೆ ಸಾಕಷ್ಟು ಸಮಯ ಬೇಕಿತ್ತೋ ಏನೋ? ಎಂದು ಕಾಂಗ್ರೆಸ್ ಕಿಡಿಕಾರಿದೆ.

NEWS DESK

TIMES OF BENGALURU