ಬಿಎಸ್‍ವೈಗೂ ತಟ್ಟಿದ ಪ್ರತಿಭಟನೆ ಬಿಸಿ

ಬೆಂಗಳೂರು : ಮಾಜಿ ಉಪಪ್ರಧಾನಿ ಡಾ.ಜಗಜೀವನರಾಮ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಬಂದಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪ್ರತಿಭಟನೆ ಬಿಸಿ ತಟ್ಟಿ, ಮುಜುಗರ ಅನುಭವಿಸುವಂತಾಯಿತು. ಡಾ.ಬಾಬುಜಗಜೀವನ್ ರಾಮ್ ಅವರ 114ನೇ ಜನ್ಮ ದಿನಾಚರಣೆ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಪ್ರತಿಮೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಇತರ ಅಧಿಕಾರಿಗಳು ಮಾಲಾರ್ಪಣೆ ಮಾಡಲು ಬಂದಿದ್ದರು.

ಈ ವೇಳೆ ರಾಮನಗರ ಮತ್ತು ಮಾಗಡಿ ತಾಲ್ಲೂಕಿನ ಕೆಲವು ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರಿಂದ ಮುಖ್ಯಮಂತ್ರಿಗಳು ಮುಜುಗರಕ್ಕೀಡಾದರು. ಮಾಗಡಿ ತಾಲ್ಲೂಕಿನಲ್ಲಿ ಜಗಜೀವನರಾಮ್ ಭವನ ನಿರ್ಮಾಣ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ. ಕಾಡುಗೋಡಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲೂ ಇಲಾಖೆ ನಿರ್ಲಕ್ಷ್ಯ ವಹಿಸಿದೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

NEWS DESK

TIMES OF BENGALURU