ನಾಳೆ ಸಾರಿಗೆ ನೌಕರರ ಮುಷ್ಕರ ಫಿಕ್ಸ್

ಬೆಂಗಳೂರು : ಸಾರಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ್ದ ಸರ್ಕಾರ ಆ ಬೇಡಿಕೆಗಳನ್ನು ಇನ್ನೂ ಈಡೇರಿಸದ ಹಿನ್ನೆಲೆಯಲ್ಲಿ ನಾಳೆ ಸಾರಿಗೆ ನೌಕರರ ಮುಷ್ಕರ ಬಹುತೇಕ ಫಿಕ್ಸ್ ಎನ್ನಲಾಗಿದೆ. ಮಾತು ತಪ್ಪಿದ ಸರ್ಕಾರದ ವಿರುದ್ಧ ನಾಳೆ ಸಿಡಿದೇಳಲಿರುವ ಸಾರಿಗೆ ನೌಕರರು ನಾಳೆ ಪ್ರತಿಭಟನೆ ನಡೆಸಲಿದ್ದು, ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.

ಈ ಹಿಂದೆ ಡಿಸೆಂಬರ್ ತಿಂಗಳಲ್ಲಿ ಮುಷ್ಕರ ಮಾಡಿದ್ದ ಸಾರಿಗೆ ನೌಕರರು ಬಳಿಕ ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ವಾಪಾಸ್ ಪಡೆದಿದ್ದರು. ಮುಖ್ಯವಾಗಿ ಆರನೇ ವೇತನ ಜಾರಿಗೆ ಸರ್ಕಾರ ಹಿಂದೇಟು ಹಾಕಿತ್ತು. ಆರನೇ ವೇತನ ಆಯೋಗ ಜಾರಿಯಾಗಲೇಬೇಕು ಎಂದು ನೌಕರರು ಬಿಗಿಪಟ್ಟು ಹಿಡಿದಿದ್ದರು. ಹೀಗಾಗಿ ನಾಳೆಯಿಂದ ಸಾರಿಗೆ ಮುಷ್ಕರಕ್ಕೆ ನೌಕರರು ನಿರ್ಧರಿಸಿದ್ದಾರೆ. ಈ ನಡುವೆ ಸಾರಿಗೆ ನೌಕರರಿಗೆ ವೇತನ ಹೆಚ್ಚಳದ ಆಮಿಷ ತೋರಿಸಿ ಮುಷ್ಕರವನ್ನು ಹತ್ತಿಕ್ಕಲು ಸರ್ಕಾರ ಪ್ಲಾನ್ ಮಾಡಿತ್ತು. ಅದು ಯಾವುದೂ ಕೈಗೂಡದ ಹಿನ್ನೆಲೆಯಲ್ಲಿ ನಾಳೆ ಬಹುತೇಕ ಮುಷ್ಕರ ಫಿಕ್ಸ್ ಎನ್ನಲಾಗಿದೆ.

NEWS DESK

TIMES OF BENGALURU